ಬೆಂಗಳೂರು: ಐಟಿ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆಯೇ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ.
ಲ್ಯಾಂಗ್ಪೋರ್ಡ್ ರಸ್ತೆಯ ಅಪಾರ್ಟ್ಮೆಂಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮತ್ತೊಂದು ಕಚೇರಿಗೆ ತೆರಳಿದ ಸಿ.ಜೆ.ರಾಯ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ.
ಪದೇಪದೆ ಐಟಿ ದಾಳಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಹೊಸೂರು ರಸ್ತೆಯ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

