ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ವಿರುದ್ಧ ಕಾಂಗೈ ದೂರು

Oplus_131072

Oplus_131072

Share It

ಬೆಂಗಳೂರು,ಏ.21: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಮಾಜಿಕ ಜಾಲತಾಣದ ಪ್ರಚಾರಕ್ಕಾಗಿ ಆಮಿಷವೊಡ್ಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ.

ಈ ಬಗ್ಗೆ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್ ಬಾಬು ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಹಾಗೂ‌
ಪ್ರಭಾವಿಗಳಾಗಿರುವವರೊಂದಿಗೆ ಸಭೆ ನಡೆಸಿದ್ದಾರೆ. ಆ ವೇಳೆ ಹಲವು ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.


Share It

You cannot copy content of this page