ರಾಜಕೀಯ ಸುದ್ದಿ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 141 ಸೀಟು ಬರಲಿವೆ, ಬರೆದಿಟ್ಟುಕೊಳ್ಳಿ

Share It

ಹಾವೇರಿ: ಈ ಬಾರಿ ಚುನಾವಣೆಯಲ್ಲಿ ನಮಗೆ 136 ಸೀಟುಗಳು ಬಂದಿದ್ದವು, ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದರು.

ನನಗೆ ನಮ್ಮ ಶಾಸಕರಿಗೆ ಆತ್ಮವಿಶ್ವಾಸವಿದೆ. 3 ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಎರಡು ಕಡೆ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ಆ ಕ್ಷೇತ್ರಗಳು ನಮ್ಮ ಬಳಿ ಇರಲಿಲ್ಲ. ಆ ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ನೀಡಿ ನಮ್ಮ ಸಂಖ್ಯಾಬಲವನ್ನು 139ಕ್ಕೆ ಏರಿಕೆ ಮಾಡಿದ್ದೀರಿ. ನಿಮಗೆಲ್ಲರಿಗೂ ಧನ್ಯವಾದ. ನಿಮ್ಮ ಈ ಋಣ ತೀರಿಸಲು ಈ ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದೇವೆ” ಎಂದು ತಿಳಿಸಿದರು.

“ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು” ಎಂದು ಘೋಷಿಸಿದರು.


Share It

You cannot copy content of this page