ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಹೋರಾಟ ನಡೆಸುತ್ತಿದ್ದವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ರಾಜ್ಯ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.
ಸಾವಿರಾರು ಸಂಖ್ಯೆಯಲ್ಲಿ ಒಟ್ಟುಗೂಡಿದ ಕಾಂಗ್ರೆಸ್ ಕಾರ್ಯಕರ್ತರು ಯುವ ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ನೇತೃತ್ವದಲ್ಲಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.
ಪೊಲೀಸರು ಅವರನ್ನು ತಡೆದು, ಬಸ್ಸಿನಲ್ಲಿ ತುಂಬಿಕೊಂಡು ಹೋಗುವ ಪ್ರಯತ್ನ ನಡೆಯಿತು. ಕೆಲವು ನಾಯಕರು ವಶಕ್ಕೆ ಪಡೆದ ಪೊಲೀಸರು, ಕಚೇರಿಯ ಸುತ್ತಲೂ ಬಿಗಿಭದ್ರತೆ ಒದಗಿಸಲಾಗಿತ್ತು.

