ಬೆಂಗಳೂರು: ರೇಸ್ ಕೋರ್ಸ್ ರಸ್ತೆಯ ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು, ಜನಾರ್ದನ ರೆಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದರು.
ಶನಿವಾರ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಜನಾರ್ದನ ರೆಡ್ಡಿ, ಡಿಸಿಎಂ ಆಗಿ ಏನ್ ಕಿಸಿದಿದ್ದೀಯಾ ಎಂದು ಡಿಕೆ ಶಿವಕುಮಾರ್ ಅವರಿಗೆ ಏಕವಚನದಲ್ಲಿ ನಿಂದಿಸಿದ್ದರು. ಹೀಗಾಗಿ, ಕಾಂಗ್ರೆಸ್ ಕಾರ್ಯಕರ್ತರು ಜನಾರ್ದನ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೇಸ್ಕೋರ್ಸ್ ರಸ್ತೆಯ ಜನಾರ್ದನ ರೆಡ್ಡಿ ನಿವಾಸಕ್ಕೆ ಮುಗ್ಗಿದ್ದರು. ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಮುತ್ತಿಗೆ ಹಾಕುವುದನ್ನು ತಪ್ಪಿಸಿದರು.
ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಹಿರಂಗ ಕ್ಷಮೆ ಕೇಳುವಂತೆ ಒತ್ತಾಯಿಸಿದರು.

