ಬೆಳಗಾವಿ : ದೆಹಲಿಯಲ್ಲಿ ನಡೆದ ಎಐ ಕುರಿತ ಸಮ್ಮೇಳನದಲ್ಲಿ ಕಾಂಗ್ರೆಸ್ಸಿನ ಕಾರ್ಯಕರ್ತರು ಏಕಾಏಕಿ ನುಗ್ಗಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಅಪಮಾನ ಮಾಡಿ ಅಂತರರಾಷ್ಟ್ರೀಯ ಮಟ್ಟದ ನಾಯಕರ ವೇದಿಕೆಯಲ್ಲಿ ರಾಷ್ಟ್ರದ ಗೌರವಕ್ಕೆ ಧಕ್ಕೆ ತಂದಿರುವ ವಿರುದ್ಧ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ನಗರದ ರಾಣಿ ಚನ್ನಮ್ಮ ವೃತ್ತದಿಂದ ಪ್ರತಿಭಟನೆ ಮೂಲಕ ತೆರಳಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಇದೇ ವೇಳೆ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡದಂತೆ ತಡೆ ಹಿಡಿದು ಪೋಲಿಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಪ್ರಶಾಂತ ಅಮ್ಮಿನಭಾವಿ, ಪ್ರಮೋದ ನುಗ್ಗಾನಟ್ಟಿ, ಸದಾಶಿವ ಪಾಟೀಲ,ಪ್ರಸಾದ್ ದೇವರಮನಿ,ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ ಹಾಗೂ ಅನೇಕ ಕಾರ್ಯಕರ್ತರಿದ್ದರು.

