ಉಪಯುಕ್ತ ಸುದ್ದಿ

ಹೊರವರ್ತುಲ ರಸ್ತೆ (ORR) ಅಭಿವೃದ್ಧಿಗೆ ಸಂಬಂಧ ORRCA, ಸ್ಥಳೀಯ ಕಂಪನಿಗಳು ಹಾಗೂ ಇತರೆ ಹಿತಾಸಕ್ತರೊಂದಿಗೆ ಸಮಾಲೋಚನಾ ಸಭೆ

Share It

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಹೊರವರ್ತುಲ ರಸ್ತೆ (ORR) ಅಭಿವೃದ್ಧಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಾಳೆ(25-07-2026) ಬೆಳಿಗ್ಗೆ 10.30 ಗಂಟೆಗೆ ಕಾಡುಬೀಸನಹಳ್ಳಿಯ ಗೋಲ್ಡ್‌ಮನ್ ಸ್ಯಾಕ್ಸ್, ವಿಂಗ್–ಸಿ, ಹೀಲಿಯೊಸ್ ಬಿಸಿನೆಸ್ ಪಾರ್ಕ್ ಸಭಾಂಗಣದಲ್ಲಿ ORRCA, ಸ್ಥಳೀಯ ಸಂಸ್ಥೆಗಳು ಹಾಗೂ ಇತರೆ ಹಿತಾಸಕ್ತರೊಂದಿಗೆ ಸಮಾಲೋಚನಾ ಸಭೆ ನಡೆಯಲಿದೆ.

ಹೊರವರ್ತುಲ ರಸ್ತೆ (ORR) ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿವಾರಣೆ, ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ನಿರ್ವಹಣೆ, ಸಾರ್ವಜನಿಕ ಸೌಲಭ್ಯಗಳ ಸುಧಾರಣೆ, ವಿವಿಧ ಇಲಾಖೆಗಳ ನಡುವಿನ ಸಮನ್ವಯ ಹಾಗೂ ಭವಿಷ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಸಮಗ್ರ ಚರ್ಚೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ.

ಬಿ-ಸ್ಮೈಲ್ (B-SMILE) ವತಿಯಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ 17.1 ಕಿ.ಮೀ. ಉದ್ದದ ಹೊರವರ್ತುಲ ರಸ್ತೆಯನ್ನು ಜಾಗತಿಕ ಮಟ್ಟದ ವಿನ್ಯಾಸ ಹಾಗೂ ಗುಣಮಟ್ಟಕ್ಕೆ ಅನುಗುಣವಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿಯೂ ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಲಿದೆ.

ಸಭೆಯಲ್ಲಿ ಈ ಕೆಳಕಂಡ ಅಧಿಕಾರಿಗಳು ಭಾಗವಹಿಸಲಿದ್ದಾರೆ:

  1. ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBA)
  2. ಆಯುಕ್ತರು, ಬೆಂಗಳೂರು ಪೂರ್ವ ನಗರ ಪಾಲಿಕೆ
  3. ಆಯುಕ್ತರು, ಬೆಂಗಳೂರು ದಕ್ಷಿಣ ನಗರ ಪಾಲಿಕೆ
  4. ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
  5. ಅಧ್ಯಕ್ಷರು, ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)
  6. ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM)
  7. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (KRIDE)
  8. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (KPTCL)
  9. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML)
  10. ಪ್ರಧಾನ ಅಭಿಯಂತರರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBA) ಹಾಗೂ ತಾಂತ್ರಿಕ ನಿರ್ದೇಶಕರು, B-SMILE
  11. ಮುಖ್ಯ ಮಹಾಪ್ರಬಂಧಕರು (CGM), ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)
  12. ಮುಖ್ಯ ಮಹಾಪ್ರಬಂಧಕರು (CGM), GAIL Gas Ltd. ಹಾಗೂ GAIL (India) Limited

ಇದಲ್ಲದೆ, ORRCA ಪ್ರತಿನಿಧಿಗಳು ಹಾಗೂ ಹೊರವರ್ತುಲ ರಸ್ತೆ ವ್ಯಾಪ್ತಿಯಲ್ಲಿರುವ ವಿವಿಧ ಕಂಪನಿಗಳ ಪ್ರತಿನಿಧಿಗಳು, ಉದ್ಯಮಿಗಳು ಮತ್ತು ಡೆವಲಪರ್‌ಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಕಾರ್ಯಯೋಜನೆ ಕುರಿತು ಸಮಗ್ರ ಚರ್ಚೆ ನಡೆಸಿ, ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು.


Share It

You cannot copy content of this page