ಬೆಂಗಳೂರು: ಲಾಂಗ್ ಹಿಡಿದ ರೀಲ್ಸ್ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಅವರಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದಲ್ಲಿ ವಿನಯ್ ಮತ್ತು ರಜತ್ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಅರ್ಜಿವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಷರತ್ತಬದ್ಧ ಜಾಮೀನು ನೀಡಿದ್ದು, ತನಿಖೆಗೆ ಸಹಕಾರ ನೀಡುವಂತೆ ಸೂಚನೆ ನೀಡಿದೆ.
ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ತಲಾ 10 ಸಾವಿರ ಶ್ಯೂರಿಟಿ ನೀಡಲು ಸೂಚನೆ ನೀಡಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಿದ್ದಲ್ಲಿ ಇಂದೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಂದು ಸಂಜೆ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆಯಿದೆ.