ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ಆರೋಪಿ ಹೇಮಾಗೆ ಜಾಮೀನು ಮಂಜೂರಾಗಿದೆ.
ಬೆಂಗಳೂರು ಗ್ರಾಮಾಂತರ ಎನ್ ಡಿಪಿಎಸ್ ನ್ಯಾಯಾಲಯ ಆಕೆಗೆ ಜಾಮೀನು ನೀಡಿದ್ದು, ಆಕೆಯ ಸೆರೆವಾಸ ತಾತ್ಕಾಲಿಕ ಅಂತ್ಯವಾದಂತಾಗಿದೆ. ನಟಿ ಹೇಮಾಳಿಂದ ಯಾವುದೇ ಮಾದಕವಸ್ತು ವಶಪಡಿಸಿಕೊಂಡಿಲ್ಲ, ಜತೆಗೆ ಆಕೆಯನ್ನು ಬಹಳ ದಿನಗಳ ನಂತರ ವಶಪಡಿಸಿಕೊಂಡು, ಆಮೇಲೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡನೆ ಮಾಡಿದ್ದರು.
ಸಿಸಿಬಿ, ಆಕೆ ಪಾರ್ಟಿಯಲ್ಲಿ ಭಾಗವಹಿಸಿದ ಮತ್ತು ಆಕೆ ದು ಪಾರ್ಟಿಯಲ್ಲಿ ಭಾಗವಹಿಸಲು ಆಗಮಿಸಿದ್ದ ಹಲವಾರು ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ವಾದ ವಿವಾದ ಆಲಿಸಿದ ನ್ಯಾಯಾಲಯ ಆಕೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಆಕೆಗೆ ವಿಚಾರಣೆಗೆ ಸಹಕಾರ ನೀಡುವಂತೆ ಸೂಚಿಸಿದೆ.

