ಸುದ್ದಿ

ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು

Share It

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ವಿಶೇಷ ಕೋರ್ಟ್ ಇಂದು ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿದೆ. ಆರೋಪಿ ಸೂರಜ್ ರೇವಣ್ಣ ಯಾವುದೇ ರೀತಿಯಲ್ಲೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ತನಿಖಾಧಿಕಾರಿ ಮುಂದೆ ಪ್ರತಿ ತಿಂಗಳ 2ನೇ ಭಾನುವಾರ ಹಾಜರಾಗಬೇಕು ಎಂದು ಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.


Share It

You cannot copy content of this page