ಬೆಂಗಳೂರು: ರೌಡಿ ಶೀಟರ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ಕೊಲೆ ಪ್ರಕರಣದಲ್ಲಿ ಬೈರತಿ ಬಂಧಿಸಲು ಸಿಐಡಿ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅವರು ಅರ್ಜಿ ಸಲ್ಲಿಸಿದ್ದು, ಜಾಮೀನು ನೀಡುವಂಥೆ ಕೋರಿಕೊಂಡಿದ್ದಾರೆ. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ಸಾಧ್ಯವಾದ್ರೆ ಸಂಜೆಯೇ ತೀರ್ಪು ಪ್ರಕಟ ಮಾಡುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ ಎನ್ನಲಾಗಿದೆ. ಇಲ್ಲವಾದಲ್ಲಿ, ನಾಳೆಗೆ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

