ಅಪರಾಧ

ಯೋಗೀಶ್‌ ಗೌಡ ಕೊಲೆ ಕೇಸ್‌: ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರಿಕರಗೆ 7 ವರ್ಷ ಜೈಲು ಶಿಕ್ಷೆ

Share It

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ 19 ಆರೋಪಿ ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರಿಕರ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧಿಶರಾದ ಮಹತ್ವದ ಆದೇಶ ಹೊರಡಿಸಿದ್ದಾರೆ.
ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರಿಕರ ಈ ಹಿಂದೆ ಅಂದರೆ 2016ರ ಜೂನ್ 15 ರಂದು ಧಾರವಾಡದ ಉಪನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದರು. ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಎ 19 ಆರೋಪಿಯಾಗಿರುವ ಚೆನ್ನಕೇಶವ ಟಿಂಗರಿಕರ ಈ ಹಿಂದೆ ಅಕ್ಟೋಬರ್‌ 31ರಿಂದ ಬಂದೋಬಸ್ತ್‌ ಕಾರಣ ವಿಚಾರಣೆಗೆ ಗೈರು ಹಾಜರಾಗಿದ್ದರು. ಆಗ ಕೂಡ ಚೆನ್ನಕೇಶವ ಟಿಂಗರಿಕರ ವಿರುದ್ಧ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೇ  2016ರ ಜೂನ್ 15ರಂದು ಯೋಗೀಶ್‌ ಗೌಡ ಕೊಲೆ ನಡೆದಾಗ ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಟಿಂಗರಿಕರ್, ವಿರುದ್ಧ ಸಾಕ್ಷಿ ನಾಶ ಹಾಗೂ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಬಳಿಕ ಧಾರವಾಡ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಟಿಂಗರಿಕರ್, ಎಫ್‌ಐಆರ್‌ಗೆ ತಡೆ ತರಲು ಯತ್ನಿಸಿದ್ದರು.
ತನ್ನ ವಿರುದ್ಧ ದಾಖಲಾದ ಎಫ್​ಐಆರ್‌ಗೆ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಅರ್ಜಿ ವಜಾಗೊಳಿಸಿತ್ತು. ಅಲ್ಲದೇ, ಆ ಸಮಯದಲ್ಲಿ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಟಿಂಗರಿಕರ್ ಗೈರಾಗಿದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಅನ್ನು ಈ ಹಿಂದೆ ಕೂಡ ಜಾರಿ ಮಾಡಿತ್ತು. ಕೋರ್ಟ್ ವಾರೆಂಟ್ ಜಾರಿ ಮಾಡಿದ ಬೆನ್ನಲ್ಲೇ ಚೆನ್ನಕೇಶವ ಟಿಂಗರಿಕರ್ ಅವರನ್ನು ಬಂಧಿಸಲು ಸಿಬಿಐ ಅಧಿಕಾರಿಗಳ ಟಿಂಗರಿಕರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಟಿಂಕರಿಗರ್ ಮನೆಯಿಂದ ಪರಾರಿಯಾಗಿದ್ದರು. ಇಂದು ವಾದ ಪ್ರತಿವಾದ ಆಲಿಸಿದ ನ್ಯಾಯಾಧಿಶರು ಇನ್ಸ್‌ಪೆಕ್ಟರ್ ಚೆನ್ನಕೇಶವ ಟಿಂಗರಿಕರ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.


Share It

You cannot copy content of this page