ಯಾಂತ್ರಿಕ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಎಂಎಂಆರ್‌ಡಿಎ ಅಧಿಕಾರಿಗಳು ತಿಳಿಸಿದ್ದಾರೆ.
ವಾಣಿಜ್ಯ ನಗರಿ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಮೆಟ್ರೋ ರೈಲು ನಿರ್ಮಾಣ ಸ್ಥಳದಲ್ಲಿ ಬುಧವಾರ ಬೆಳಿಗ್ಗೆ ಬೃಹತ್ ಬೀಮ್ ಮತ್ತು ಮೊಬೈಲ್ ಕ್ರೇನ್ ಬಿದ್ದಿವೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.
ಘಟನೆ ನಡೆದ ನಂತರ ಹಿರಿಯ ಎಂಎಂಆರ್‌ಡಿಎ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತೆರವು ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಹಾನಿಗೊಳಗಾದ ಪ್ರದೇಶವನ್ನು ಸಾಧ್ಯವಾದಷ್ಟು ಬೇಗ ಸಂಚಾರಕ್ಕೆ ಮುಕ್ತಗೊಳಿಸಲು ಅವರು ಸುರಕ್ಷಿತ ಕಾರ್ಯಾಚರಣೆಯಲ್ಲಿದ್ದಾರೆ.

