ಬೆಂಗಳೂರು, ಏ.13: ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್ಪೋಸ್ಟ್ ನಿರ್ಮಿಸಿ ಹದ್ದಿನ ಕಣ್ಣು ಇಡಲಾಗಿದೆ. ಅದರಂತೆ ಇಂದು(ಏ.13) ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯನಗರದಲ್ಲಿ ಎರಡು ಕಾರು ಒಂದು ಬೈಕ್ನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೈಕ್ನಲ್ಲಿ ಒಂದು ಬ್ಯಾಗ್, ಎರಡು ಕಾರ್ನಲ್ಲಿ ತಲಾ ಒಂದೊಂದು ಬ್ಯಾಗ್ನ್ನು ಜಪ್ತಿ ಮಾಡಲಾಗಿದ್ದು, ಫಾರ್ಚುನರ್ ಕಾರಿನಲ್ಲಿದ್ದ ಐವರು ಎಸ್ಕೇಪ್ ಆಗಿದ್ದಾರೆ. ಇನ್ನು ಹಣ ಎಣಿಸಲು ಸಾಧ್ಯವಾಗದೆ ಬ್ಯಾಗ್ನ್ನು ಚುನಾವಣಾ ಅಧಿಕಾರಿಗಳು ಪೊಲೀಸ್ ಠಾಣೆಗೆ ತಂದಿದ್ದಾರೆ.
ಹಣ ಎಣಿಸುವ ಮಷಿನ್ ತಂದ ಐಟಿ ಸಿಬ್ಬಂದಿ
ಸ್ಥಳದಲ್ಲಿ MCC ನೋಡಲ್ ಅಧಿಕಾರಿ ಮನೀಷ್ ಮೌದ್ಗಿಲ್ ಇದ್ದು, ಇದೀಗ ಐಟಿ ಸಿಬ್ಬಂದಿ ಹಣ ಎಣಿಸುವ ಮಷಿನ್ ತಂದಿದ್ದಾರೆ. ಸದ್ಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಕಾಯುತ್ತಿದ್ದಾರೆ. ಇನ್ನು ಸೀಜ್ ಆದ ಬೈಕ್ ಧನಂಜಯ ಎಂಬುವರಿಗೆ ಸೇರಿದ್ದಾಗಿದ್ದು, ಕಾರು ಸೋಮಶೇಖರ್ ಎಂಬುವರಿಗೆ ಸೇರಿದೆ ಎನ್ನಲಾಗಿದೆ. ಸಧ್ಯ ಅಧಿಕಾರಿಗಳು ಎರಡು ಕೌಂಟಿಂಗ್ ಮೆಷಿನ್ ಮೂಲಕ ಹಣ ಎಣಿಸಲು ಮುಂದಾಗಿದ್ದಾರೆ.
ಕಾರಿನ ಒಳಗಡೆ ಇದ್ದ ದಾಖಲಾತಿಗಳನ್ನ ವಶಕ್ಕೆ ಪಡೆದ ಚುನಾವಣಾಧಿಕಾರಗಳು
ಇದೇ ವೇಳೆ ಕಾರಿನ ಒಳಗಡೆ ಇದ್ದ ದಾಖಲಾತಿಗಳನ್ನ ಚುನಾವಣಾಧಿಕಾರಗಳು ವಶಕ್ಕೆ ಪಡೆದಿದ್ದಾರೆ. ಕಾರಿನ ಒಳಗಡೆ ಇದ್ದ ಒಂದು ಮೊಬೈಲ್ ಮತ್ತುಒಂದಷ್ಟು ದಾಖಲಾತಿಗಳು ಚುನಾವಣಾಧಿಕಾರಿಗಳಿಗೆ ಲಭ್ಯವಾಗಿದ್ದು, ಸೋಮಶೇಖರ್ ಗಂಗಾಧರಯ್ಯ ಎಂಬುವರ ಹೆಸರಲ್ಲಿ ಕೆಲವು ದಾಖಲೆಗಳು ಇರುವುದನ್ನು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ತನಿಖೆ ಬಳಿಕ ನಿಖರ ಮಾಹಿತಿ ದೊರೆಯಲಿದೆ.