ಕಟಕ್: ಒಡಿಸ್ಸಾದ ಕಟಕ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ೨೫ ಲಕ್ಷ ರು. ಪರಿಹಾರ ನೀಡುವುದಾಗಿ ಒಡಿಸ್ಸಾ ಸರಕಾರ ಘೋಷಣೆ ಮಾಡಿದೆ.
ಒಡಿಸ್ಸಾದ ಸಿಎಂ ಮೋಹನ್ ಚರಣ್ ಮಾಂಝಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡುಬAದಿದೆ. ನಿಖರವಾದ ಕಾರಣವನ್ನು ಪತ್ತೆಹಚ್ಚಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮೃತರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಿಳಿಸಿದ್ದಾರೆ.
ನಡುರಾತ್ರಿ ೨.೩೦ರ ಸುಮಾರಿಗೆ ಘಟನೆ ನಡೆದಿದ್ದು, ಐಸಿಯುನಲ್ಲಿದ್ದ ಹತ್ತಕ್ಕೂ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ. ಅವರನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಸಿದ ಕೆಲವು ಆಸ್ಪತ್ರೆಯ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮೃತರ ಕುಟುಂಬಗಳಿಗೆ ೨೫ ಲಕ್ಷ ರು. ಪರಿಹಾರ ಘೋಷಣೆ ಮಾಡಲಾಗಿದೆ.

