ಅಪರಾಧ ಸಿನಿಮಾ ಸುದ್ದಿ

ಡಿ ಗ್ಯಾಂಗ್‌ನ ಪೊಲೀಸ್ ಕಸ್ಟಡಿ ಇಂದು ಅಂತ್ಯ

Share It

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಬಂಧಿತವಾಗಿರುವ ದರ್ಶನ್ ಮತ್ತು ಗ್ಯಾಂಗ್‌ನ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರು ತೀರ್ಮಾನಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ಪೊಲೀಸರ ವಶದಲ್ಲಿದ್ದಾರೆ. ಅವರ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ. ಹೀಗಾಗಿ, ಪೊಲೀಸರು ದರ್ಶನ್ ಮತ್ತು ಗ್ಯಾಂಗ್ ಅನ್ನು 24 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಪಡಿಸಲಿದ್ದಾರೆ.

ಇನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಯನ್ನು ವಿಸ್ತರಣೆ ಮಾಡುವಂತೆ ಮನವಿ ಮಾಡಲು ಪೊಲೀಸರು ತೀರ್ಮಾನಿಸಿದ್ದಾರೆ. ಈಗಾಗಲೇ ಬಹುತೇಕ ಮಹಜರು ಕಾರ್ಯ ಮುಗಿದಿದ್ದು, ಇನ್ನೊಂದಿಷ್ಟು ಮಾಹಿತಿಗಳ ಸಂಗ್ರಹದ ಅವಶ್ಯಕತೆಯಿದ್ದು, ಮತ್ತೇ ನಾಲ್ಕು ದಿನ ವಿಸ್ತರಣೆ ಮಾಡುವಂತೆ ಮನವಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಇದಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.

ಪೊಲೀಸರ ಮನವಿ ಒಪ್ಪಿ ನ್ಯಾಯಾಲಯ ದರ್ಶನ್ ಮತ್ತು ಗ್ಯಾಂಗ್ ಅನ್ನು ಮತ್ತೇ ಪೊಲೀಸ್ ಕಸ್ಟಡಿಗೆ ನೀಡಬಹುದು. ಒಂದು ವೇಳೆ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪದಿದ್ದರೆ, ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವುದು ಅನಿವಾರ್ಯ. ಆಗ ದರ್ಶನ್ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲ್ ಸೇರಬೇಕಾಗುತ್ತದೆ.


Share It

You cannot copy content of this page