ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸೇರಿದಂತೆ ಎಲ್ಲಾ ಬಂಧಿತ ಆರೋಪಿಗಳ ಮೊಬೈಲ್ ಫೋನ್ ಗಳ ಪಗೆ ನ್ಯಾಯಾಲಯ ಅನುಮತಿ ನೀಡಿದೆ.
ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳು ಸಂಗ್ರಹಿಸಲು ಪೊಲೀಸರು ಎಲ್ಲಾ ಆರೋಪಿಗಳ ಆಂಡ್ರಾಯ್ಡ್ ಮೊಬೈಲ್ ಫೋನ್ ಗಳನ್ನು ವಶಕ್ಕೆ ತೆಗೆದುಕೊಂಡು ತಪಾಸಣೆ ನಡೆಸಲು ಮುಂದಾಗಿದ್ದಾರೆ.
ಇಷ್ಟಾದರೂ ದರ್ಶನ್ ಸೇರಿ ಹಲವು ಆರೋಪಿಗಳು ತಮ್ಮ ಮೊಬೈಲ್ ಫೋನ್ ನಲ್ಲಿರುವ ಕೆಲವು ಸಾಕ್ಷಿಗಳನ್ನು ನಾಶ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ದರ್ಶನ್ ಸೇರಿ ಎಲ್ಲಾ ಆರೋಪಿಗಳ ಮೊಬೈಲ್ ತಪಾಸಣೆಗೆ ಕೋರ್ಟ್ ಅನುಮತಿ
