ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸದ್ಯ
ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರ ಪರವಾಗಿ ಕುಟುಂಬದವರು ಕಾನೂನಿನ ಹೋರಾಟ ನಡೆಸುತ್ತಿದ್ದಾರೆ.
ಆರಂಭದಲ್ಲಿ ದರ್ಶನ್ ಅವರು ಅರೆಸ್ಟ್ ಆದಾಗ ಕುಟುಂಬದವರು ಅವರನ್ನು ನೋಡಲು ಕೂಡಲೇ ಜೈಲಿಗೆ ಬಂದಿರಲಿಲ್ಲ. ಅದರೆ ನಂತರ ಪರಪ್ಪನ ಅಗ್ರಹಾರ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ, ತಮ್ಮ ದಿನಕರ್ ತೂಗುದೀಪ, ತಾಯಿ ಮೀನಾ ಮುಂತಾದವರು ಬಂದು ದರ್ಶನ್ಗೆ ಧೈರ್ಯ ತುಂಬಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯ ಭೇಟಿ ಮಾಡಲು ಕುಟುಂಬದವರಿಗೆ ಹಾಗೂ ಆಪ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಇಂದು (ಜುಲೈ 15) ದಿನಕರ್ ತೂಗುದೀಪ ಹಾಗೂ ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರಕ್ಕೆ ಬಂದು ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಆದಷ್ಟು ಬೇಗ ದರ್ಶನ್ ಅವರಿಗೆ ಜಾಮೀನು ಸಿಗಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಪವಿತ್ರಾ ಗೌಡ ಹಾಗೂ ಅವರ ಸಹಚರರು ಕೂಡ ಜೈಲಿನಲ್ಲಿದ್ದಾರೆ.