ರಾಜಕೀಯ ಸಿನಿಮಾ ಸುದ್ದಿ

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ

Share It

ಬೆಂಗಳೂರು:

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ಹಿರಿಯ ಕಲಾವಿದ ದ್ವಾರಕೀಶ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

“ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಕಲಾವಿದನಾಗಿ ಅಗಾಧವಾದ ಸೇವೆ ಸಲ್ಲಿಸಿರುವ ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ.

ಕನ್ನಡ ಚಿತ್ರರಂಗದಲ್ಲಿ ಅನೇಕ ಹೊಸ ಮೈಲುಗಲ್ಲುಗಳನ್ನು ಸಾಧಿಸಿ, ಚಿತ್ರರಂಗಕ್ಕೆ ದೊಡ್ಡ ಅಡಿಪಾಯ ಹಾಕಿಕೊಟ್ಟವರಲ್ಲಿ ದ್ವಾರಕೀಶ್ ಕೂಡ ಒಬ್ಬರು.

ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್, ಡಾ.ಅಂಬರೀಶ್, ಶಂಕರ್ ನಾಗ್ ಸೇರಿದಂತೆ ಕನ್ನಡ ಚಿತ್ರರಂಗದ ಘಟಾನುಘಟಿ ನಟರ ಜೊತೆ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಬೆಳೆಸಿದ್ದಾರೆ.

ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ


Share It

You cannot copy content of this page