ರಾಜಕೀಯ ಸುದ್ದಿ

ಡಿಸಿಎಂ ಡಿ.ಕೆ. ಶಿವಕುಮಾರ್ ಡಾವೊಸ್ ಪ್ರವಾಸ ರದ್ದು

Share It

ನವದೆಹಲಿ: ಜನವರಿ 18ರಂದು ನಿಗದಿಯಾಗಿದ್ದ ವರ್ಲ್ಡ್ ಏಕನಾಮಿಕ್ ಫೋರಂ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ.

ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನದ ಜೊತೆಗೆ ಜ. 22ರಿಂದ ಆರಂಭವಾಗುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗವಹಿಸಬೇಕಾಗಿದೆ.


Share It

You cannot copy content of this page