ಬೆಂಗಳೂರು: ಸಿಎಂ ಸ್ಥಾನದ ಕಿತ್ತಾಟದ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರ ಖರ್ಗೆ ನಿವಾಸದಲ್ಲಿ ಗುರುವಾರ ಬೆಳಗ್ಗೆ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್ ಅವರು ರಾಜ್ಯ ರಾಜಕೀಯ ಬೆಳವಣಿಗೆ, ಸಿಎಂ ಸ್ಥಾನದ ಹಗ್ಗಜಗ್ಗಾಟದ ಬಗ್ಗೆ ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ.
ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ವಿಚಾರದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಕುತೂಹಲದ ಸಂದರ್ಭದಲ್ಲಿ ಡಿಸಿಎಂ ಖರ್ಗೆ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

