ದಾವಣಗೆರೆ: ಮಟ್ಕಾ ಆಡಿಸುತ್ತಿದ್ದ ಎಂಬ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿ ಸಾವನ್ನಪ್ಪಿದ್ದು, ಲಾಕಪ್ ಡೆತ್ ಎಂದು ಹೇಳಲಾಗುತ್ತಿದೆ. ಸಂಬAಧಿಕರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿರುವ ಈ ವೇಳೆ ಉದ್ರಿಕ್ತರ ಗುಂಪಿನ ಪುಂಡಾಟ ಹೆಚ್ಚಾಗಿದ್ದು, ಪೊಲೀಸ್ ವಾಹನಗಳನ್ನು ಉರುಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಮಟ್ಕಾ ಆಡಿಸುತ್ತಿದ್ದ ಆರೋಪದಲ್ಲಿ ಆದಿಲ್ ಎಂಬ ಆರೋಪಿಯನ್ನು ಚನ್ನಗಿರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಆರೋಪಿ ಇದೇ ವೇಳೆ ಲೋ ಬಿಪಿಯಾಗಿ ಕುಸಿದುಬಿದ್ದಿದ್ದ. ನಂತರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ, ಆತ ಬದುಕುಳಿಯಲಿಲ್ಲ.
ಘಟನೆ ತಿಳಿಯುತ್ತಿದ್ದಂತೆ ಮೃತನ ಸಂಬAಧಿಕರು ಮತ್ತು ಸಾರ್ವಜನಿಕರು ಪೊಲೀಸ್ ಠಾಣೆಯ ಸುತ್ತಲೂ ಜಮಾಯಿಸಿ ಪ್ರತಿಭಟನೆ ಆರಂಭಿಸಿದರು. ಲಾಕಪ್ ಡೆತ್‌ನಿಂದಲೇ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿ, ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದರು. ಕೆಲವು ಕಿಡಿಗೇಡಿಗಳು ಪೊಲೀಸ್ ಜೀಪ್ ಅನ್ನು ಉರುಳಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು, ಪೋಷಕರ ಮನವೊಲಿಸಿ, ಪರಿಸಥಿತಿ ನಿಯಂತ್ರಿಸುವ ಕೆಲಸ ಮಾಡುತ್ತಿದ್ದು, ಆಕ್ರೋಶಿತರು ಆದಿಲ್ ಸಾವಿಗೆ ನ್ಯಾಯ ಒದಗಿಸುವಂತೆ ಪಟ್ಟು ಹಿಡಿದಿದ್ದಾರೆ. ಪೊಲೀಸರ ವರ್ತನೆಗೆ ಸರಿಯಾದ ಶಿಕ್ಷೆಯಾಗಬೇಕು. ಲಾಕಪ್ ಡೆತ್ ಎಂದು ಪ್ರಕರಣ ದಾಖಲು ಮಾಡಬೇಕು, ಸಂಬAಧಿಸಿದAತೆ ಪೊಲೀಸರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಪಟ್ಟುಹಿಡಿದಿದ್ದಾರೆ.