ನವದೆಹಲಿ: ನೆಹರೂ ಕುಟುಂಬದ ಹೆಸರಿನಲ್ಲಿಯೇ ದೇಶದ ಎಲ್ಲ ಸಂಸ್ಥೆಗಳಿವೆ ಎಂದು ಆರೋಪ ಮಾಡುತ್ತಲೇ ಬಂದಿದ್ದ ಬಿಜೆಪಿ, ಇದೀಗ ಅದೇ ಸಂಸ್ಕೃತಿಯನ್ನು ಮುಂದುವರಿಸಿದ್ದು, ನೋಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಹೆಸರಿಡಲು ತೀರ್ಮಾನಿಸಿದೆ.
ಈ ಕುರಿತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕೃತ ಘೋಷಣೆ ಮಾಡಿದ್ದು, ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ಜೇವರ್ ವಿಮಾನ ನಿಲ್ದಾಣ ಎಂಬುದರ ಬದಲಿಗೆ ಇನ್ಮುಂದೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿಗೆ ಹೊಂದಿಕೊಂಡಂತಹ ಎರಡನೇ ವಿಮಾನ ನಿಲ್ದಾಣ ಇದಾಗಿದ್ದು, 2026ರ ಮಾರ್ಚ್ ನಲ್ಲಿ ಉದ್ಘಾಟನೆಗೊಂಡಿತ್ತು. ಇದೀಗ ವಿಮಾನ ನಿಲ್ದಾಣಕ್ಕೆ ಮೋದಿ ಹೆಸರಿಡಲು ತೀರ್ಮಾನಿಸಿರುವುದು ಟೀಕೆಗೆ ಕಾರಣವಾಗಿದೆ.
