ಬೆಂಗಳೂರು: ನೆರೆಯ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ತೀವ್ರತೆ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಆರೋಗ್ಯ ಇಲಾಖೆ ಅಭಿಯಾನ ನಿರ್ದೇಶಕರು, ನಿತ್ಯ ಸುಮಾರು 150ರಿಂದ 200ಟೆಸ್ಟ್ ಗಳನ್ನು ಕಡ್ಡಾಯವಾಗಿ ಮಾಡುವಂತೆ ಸೂಚನೆ ನೀಡಿದೆ. ರಾಜ್ಯದಲ್ಲಿಯೂ ನಿಧಾನವಾಗಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಟೆಸ್ಟಿಂಗ್ ಹೆಚ್ಚಿಸಲು ಸರಕಾರ ತೀರ್ಮಾನಿಸಿದೆ.