ಅಪರಾಧ ರಾಜಕೀಯ ಸುದ್ದಿ

ದೆಹಲಿ ಅಬಕಾರಿ ನೀತಿ ಪ್ರಕರಣ: ಸು.ಕೋರ್ಟ್ ನಿಂದ ಸಿಎಂ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು

Share It

ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇಂದು ಶುಕ್ರವಾರ ದೆಹಲಿಯ ಸುಪ್ರೀಂಕೋರ್ಟ್ ಮುಂದೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆಯಲ್ಲಿ ಕೇಂದ್ರ ಜಾತಿ ನಿರ್ದೇಶನಾಲಯ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ವಿರೋಧಿಸಿತು.

ಆದರೆ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸುಪ್ರೀಂಕೋರ್ಟ್ ಕೇಜ್ರಿವಾಲ್ ಅವರಿಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ಆದೇಶ ಪ್ರಕಟಿಸಿತು.

ಕಳೆದ ಮಾರ್ಚ್ 21 ರಂದು ಇಡಿ ಅಧಿಕಾರಿಗಳು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು‌.


Share It

You cannot copy content of this page