ರಾಜಕೀಯ ಸುದ್ದಿ

ರುಚಿಕರ ಉಪಹಾರ, ಮಧ್ಯಾಹ್ನದ ಊಟ, ವ್ಯವಸ್ಥಿತ ವಿತರಣೆ; ತೃಪ್ತರಾದ 1.35 ಲಕ್ಷಕ್ಕೂ ಅಧಿಕ ಜನಸಾಗರ

Share It

ಹುಬ್ಬಳ್ಳಿ: ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಐತಿಹಾಸಿಕ ಕಾರ್ಯಕ್ರಮಕ್ಕೆ ಎರಡು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ್ದು ಸಾರ್ವಜನಿಕರಿಗೆ ರುಚಿ, ಶುಚಿಯಾದ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮಕ್ಜೆ ಆಗಮಿಸಿದ್ದವರಿಗೆ ಶಿಸ್ತುಬದ್ದವಾಗಿ ಆಹಾರ ವಿತರಣೆಗೆ ವ್ಯವಸ್ಥೆಗೆ ವ್ಯಾಪಕ ಸಿದ್ಧತೆ ಮಾಡಲಾಗಿತ್ತು. ರುಚಿಕರ ಉಪಹಾರ ಹಾಗೂ ಮಧ್ಯಾಹ್ನದ ಊಟವನ್ನು ಶಿಸ್ತುಬದ್ಧವಾಗಿ ವಿತರಣೆ ಮಾಡಲಾಯಿತು.
ಭಾರೀ ಜನಸಂದಣಿ ಇದ್ದರೂ ಸಹ, ಬೆಳಿಗ್ಗೆ 30 ಸಾವಿರಕ್ಕೂ ಅಧಿಕ ಜನರಿಗೆ ಉಪಹಾರ ವಿತರಿಸಲಾಯಿತು.

ಊಟ, ಉಪಹಾರ ವಿತರಣೆಗೆ ಒಟ್ಟು 124 ಕೌಂಟರ್‌ ಸ್ಥಾಪಿಸಲಾಗಿತ್ತು. ಬೆಳಗಿನ ಉಪಹಾರವಾಗಿ 30,000 ಜನರಿಗೆ ಉಪ್ಪಿಟ್ಟು ವಿತರಣೆ ಮಾಡಲಾಗಿದೆ. ನಂತರ ಮಧ್ಯಾಹ್ನದ ಊಟವಾಗಿ ಪಲಾವ್, ಮೊಸರನ್ನ, ಮೈಸೂರು ಪಾಕ್ ಹಾಗೂ ಸೇರುವಾ ನೀಡಲಾಯಿತು. ಒಟ್ಟು 1.50 ಲಕ್ಷಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಲ್ಲದೆ, 2 ಲಕ್ಷ ಜನರಿಗೆ ವಾಟರ್ ಬಾಟಲ್ ವ್ಯವಸ್ಥೆ ಮಾಡಲಾಗಿತ್ತು.

ಉಪಹಾರ, ಊಟದ ಸಿದ್ಧತೆಗಾಗಿ 300 ಜನ, ಊಟದ ವಿತರಣೆಗಾಗಿ 200 ಸಿಬ್ಬಂದಿ ಹಾಗೂ ಸ್ವಚ್ಛತಾ ಕಾರ್ಯಕ್ಕೆ 150 ಕಾರ್ಮಿಕರನ್ನು ನಿಯೋಜಿಸಲಾಗಿತ್ತು. ಊಟದ ನಂತರ ಜನರಿಗೆ ಕೈ ತೊಳೆಯುವ ವ್ಯವಸ್ಥೆಗೆ 20 ನೀರಿನ ಟ್ಯಾಂಕರ್‌ ನಿಲ್ಲಿಸಲಾಗಿತ್ತು. ಆಹಾರ ವಿತರಣೆಯಲ್ಲಿ ಶುದ್ಧತೆ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಅಡಿಗೆ ತಯಾರಿಕೆ, ಊಟ ಬಡಾವಣೆ ಮತ್ತು ಸ್ವಚ್ಛತಾ ಕಾರ್ಯಗಳು ವಿವಿಧ ಕಾರ್ಮಿಕರ ಸಮನ್ವಯದಿಂದ ನಡೆದವು.

ಜನಸಂದಣಿ ಹೆಚ್ಚಿದ್ದರೂ ಸಹ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರು.

ಸಹಾಯಕ ಪೊಲೀಸ್ ಆಯುಕ್ತ ಮಂಜುನಾಥ ಬಳಗಾನೂರಮಠ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ನಿಗಮದ ಕಾರ್ಯಪಾಲಕ ಅಭಿಯಂತರ ಪ್ರಸನ್ನಕುಮಾರ, ಜವಾಹರ ಜೋಗಿ, ಚೇತನಕುಮಾರ ನೇತೃತ್ವದಲ್ಲಿ ಸಮರ್ಥ ಹಾಗೂ ಶಿಸ್ತುಬದ್ಧವಾಗಿ ನಿರ್ವಹಿಸಲಾಯಿತು. ಅದ್ಭುತ ಕಾರ್ಯಕ್ರಮ ಮತ್ತು ರುಚಿಕರ ಊಟದಿಂದ ತೃಪ್ತರಾದ ಸಾರ್ವಜನಿಕರು, ಆಯೋಜಕರು ನಿರ್ವಹಿಸಿದ ಕಾರ್ಯವನ್ನು ಶ್ಲಾಘಿಸಿದರು.


Share It

You cannot copy content of this page