ಬೆಂಗಳೂರು: ಡಾಲಿ ಧನಂಜಯ ಅಭಿನಯದ ಕೋಟಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಟ್ರೈಲರ್ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಇದರ ಜತೆಗೆ ಕೋಟಿ ಸಿನಿಮಾ ಮೂಲಕ ಜಿಯೋ ಸ್ಟುಡಿಯೋಸ್ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿರುವುದು ಮಹತ್ವದ ವಿಷಯವಾಗಿದೆ.
ಕೋಟಿ ಸಿನಿಮಾ ಟೀಸರ್ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿ ಭಾನುವಾರ ನಡೆದಿದ್ದು, ಕನ್ನಡ ಸಿನಿಮಾ ಮಾರುಕಟ್ಟೆಗೆ ದೇಶದ ಪ್ರಮುಖ ನಿಮರ್ಾಣ ಸಂಸ್ಥೆ ಜಿಯೋ ಸ್ಟುಡಿಯೋಸ್ ‘ಕೋಟಿ’ ಸಿನಿಮಾ ಮೂಲಕ ಕಾಲಿಟ್ಟಿದೆ. ಈ ಸಿನಿಮಾಗೆ ಪ್ರತಿಭಾವಂತ ನಟ ಧನಂಜಯ ನಾಯಕರಾಗಿದ್ದು, ಪರಮ್ ಇದೇ ಮೊದಲ ಬಾರಿಗೆ ನಿದರ್ೇಶಕರ ಕ್ಯಾಪ್ ಧರಿಸಿದ್ದಾರೆ.
ಬೈಪನ್ ಭಾರಿ ದೇವಾ (ಮರಾಠಿ), ಆಟರ್ಿಕಲ್ 370, ತೇರಿ ಬಾತೋಂಮೆ ಐಸಾ ಉಲ್ಜಾಜಿಯಾ, ಶೈತಾನ್ ಮತ್ತು ಲಾಪಾತಾ ಲೇಡೀಸ್ ಹೀಗೆ ಒಂದಾದ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನು ಜಿಯೋ ಸ್ಟುಡಿಯೋಸ್ ಕೊಟ್ಟಿದೆ. ಈಗ ಕನ್ನಡ ಮಾರುಕಟ್ಟೆಗೆ ಪ್ರವೇಶಿಸುವ ಮೂಲಕ ತನ್ನ ಸ್ಥಾನವನ್ನು ಈ ನಿಮರ್ಾಣ ಸಂಸ್ಥೆ ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನದಲ್ಲಿದೆ.
ನಟಿಸುವ ಬದಲು ಪಾತ್ರವೇ ಆಗಿಬಿಡುವ ಧನಂಜಯ ಕನ್ನಡದ ಸೂಕ್ಷ್ಮ ನಟ. ತಮ್ಮ ಹೊಸ ಸಿನಿಮಾ ಕೋಟಿಯ ಪಾತ್ರದ ಬಗ್ಗೆ ಎಕ್ಸೈಟ್ ಆಗಿರುವ ಅವರು ಈ ಸಿನಿಮಾದಲ್ಲಿ ಅಭಿನಯದ ಹೊಸ ಮಗ್ಗುಲುಗಳನ್ನು ಅನ್ವೇಷಿಸಿದ್ದಾರೆ. ಒಂದೇ ಒಂದು ಕೋಟಿ ಸಿಕ್ಕಿಬಿಟ್ಟರೆ ಅಥವಾ ದುಡಿಯೋದಕ್ಕಾದರೆ ಸೆಟ್ಲ್ ಆಗಿಬಿಡಬಹುದು ಎಂದು ಎಲ್ಲರೂ ಅಂದ್ಕೊಳ್ತಿತರ್ಾರೆ. ನಮ್ ಕೋಟಿನೂ ಅಷ್ಟೇ. ಎಲ್ಲಾ ಮನೆಗಳಲ್ಲೂ ಈ ಕೋಟಿಯಂಥ ಅಣ್ಣ, ತಮ್ಮ, ಮಗ ನಿಮಗೆ ಸಿಕ್ತಾರೆ. ಕಷ್ಟಪಟ್ಟು ದುಡಿದು ಎಲ್ಲಾ ಸರಿ ಮಾಡ್ಕೋಬಹುದು ಅಂದ್ಕೋತಾ ಇತರ್ಾರೆ’ ಎಂದು ಪಾತ್ರದ ಬಗ್ಗೆ ಡಾಲಿ ಧನಂಜಯ ಮಾತನಾಡಿದ್ದಾರೆ.
ನಿದರ್ೇಶಕ ಪರಮ್ಗೆ ಇದು ಚೊಚ್ಚಲ ಸಿನಿಮಾ. ಸಿನಿಮಾ ನಿದರ್ೇಶಕನಾಗಿ ಮೊದಲ ಅನುಭವವಾದರೂ ಕತೆ ಹೇಳುವುದು ಅವರಿಗೆ ಹೊಸದಲ್ಲ. ಟೆಲಿವಿಷನ್ ಚಾನೆಲ್ಲಿನಲ್ಲಿ ಹಲವು ಯಶಸ್ವಿ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ರೂಪಿಸಿದ ಅನುಭವವಿರುವ ಅವರು ಇಲ್ಲಿ ವಿಶಾಲ ಕ್ಯಾನ್ವಾಸಿನಲ್ಲಿ ಕಥೆ ಹೇಳುವ ಸವಾಲನ್ನು ಸ್ವೀಕರಿಸಿದ್ದಾರೆ.
ಡಾಲಿ ಧನಂಜಯ್ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಹಲವು ಜಾಹೀರಾತುಗಳಲ್ಲಿ ಈಗಾಗಲೇ ಕಾಣಿಸಿಕೊಂಡಿರುವ ಕೊಡಗು ಮೂಲದ ಕನ್ನಡದ ನಟಿ ಮೋಕ್ಷಾಗೆ ಇದು ಮಹತ್ವದ ಸಿನಿಮಾ. ಸಪ್ತ ಸಾಗರದಾಚೆ ಸಿನಿಮಾದ ನಂತರ ಜನರಿಗೆ ಹೆಚ್ಚು ಪರಿಚಯವಾದ ರಮೇಶ್ ಇಂದಿರಾ ಈ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದಾರೆ. ಕೋಟಿ ಸಿನಿಮಾ ಡ್ರಾಮಾ ಥ್ರಿಲ್ಲರ್ ಎಳೆಯನ್ನು ಹೊಂದಿದೆ.
ವಾಸುಕಿ ವೈಭವ್ ಹಾಡುಗಳಿಗೆ ಸ್ವರ ಸಂಯೋಜನೆ ಮಾಡಿದ್ದಾರೆ. ಸಿನಿಮಾದಲ್ಲಿ ಐದು ಹಾಡುಗಳಿವೆ. ಮೂರು ಹಾಡುಗಳಿಗೆ ಯೋಗರಾಜ್ ಭಟ್ ಸಾಹಿತ್ಯ ಇದೆ. ಒಂದು ಹಾಡನ್ನು ಸ್ವತಃ ವಾಸುಕಿ ಬರೆದಿದ್ದಾರೆ. ಹಿನ್ನೆಲೆ ಸಂಗೀತ ‘ಕೋಟಿ’ ಸಿನಿಮಾದ ಮುಖ್ಯ ಭಾಗವಾಗಿದ್ದು, ಆ ಹೊಣೆಯನ್ನು 777 ಚಾಲರ್ಿ ಮತ್ತು 2008 ಸಿನಿಮಾ ಖ್ಯಾತಿಯ ಸಂಗೀತ ನಿದರ್ೇಶಕ ನೊಬಿನ್ ಪೌಲ್ ಹೊತ್ತಿದ್ದಾರೆ. ಅವರು ಸಂಗೀತ ಸಂಯೋಜನೆಯ ಮಲಯಾಳಮ್ ಚಿತ್ರ 2008 ಆಸ್ಕರ್ ಪ್ರಶಸ್ತಿಗೆ ಈ ವರ್ಷ ಭಾರತದಿಂದ ಅಧಿಕೃತ ಆಯ್ಕೆ ಆಗಿತ್ತು.