ಶಿವಮೊಗ್ಗ : ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಭಾನುವಾರ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಗೆಲುವಿಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿದರು.
ಈ ವೇಳೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ ಮೇಘರಾಜ್ , ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್. ಎನ್. ಚನ್ನಬಸಪ್ಪ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯರಾದ ಡಿ .ಎಸ್. ಅರುಣ್, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂ. ಬಿ. ಹರಿಕೃಷ್ಣ , ನಗರಾಧ್ಯಕ್ಷರಾದ ಮೋಹನ್ ರೆಡ್ಡಿ , ಜಿಲ್ಲಾ ಬಿಜೆಪಿ ಖಜಾಂಚಿಗಳಾದ ಎನ್. ಡಿ. ಸತೀಶ್ , ಬಿಜೆಪಿ ಮುಖಂಡರಾದ ಎ. ಜಿ. ನಾಗರಾಜ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

