ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಸರಕಾರ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದುಕೊಳ್ಳುತ್ತಾ ಎಂಬ ಅನುಮಾನ ಇದೀಗ ವ್ಯಕ್ತವಾಗುತ್ತಿದೆ.
ಸಂಸತ್ನ ಉಭಯ ಸದನಗಳಲ್ಲಿ ವಿಪಕ್ಷಗಳು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯುವಂತೆ ಆಗ್ರಹಿಸುತ್ತಿರುವುದು ಮತ್ತು ವಿದ್ಯಾರ್ಥಿಗಳ ಪ್ರತಿಭಟನೆ ವ್ಯಾಪಕವಾಗುತ್ತಿರುವುದನ್ನು ಗಮನಿಸಿ, ರಾಜೀನಾಮೆ ಪಡೆಯಲು ಸರಕಾರ ತೀರ್ಮಾನಿಸಿದೆ ಎನ್ನಲಾಗುತ್ತಿದೆ.
ಧಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆ ನೀಡುವ ಸಲುವಾಗಿ ಸ್ಫೀಕರ್ ಓಂ ಪ್ರಕಾಶ್ ಬಿರ್ಲಾ ಅವರನ್ನು ಭೇಟಿಯಾಗಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಭೇಟಿಗೆ ಸಮಯ ನಿಗದಿಯಾಗಿದ್ದು, ರಾಜೀನಾಮೆ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

