ಕ್ರೀಡೆ ಸುದ್ದಿ

ಒಲಿಂಪಿಕ್ಸ್‌ ನಿಂದಲೇ ವಿನೇಶ್ ಪೊಗಟ್ ಅನರ್ಹ: ಭಾರತಕ್ಕೆ ಕೈತಪ್ಪಿದ ಪದಕ!

Share It

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ.

ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್ ಅವರ ತೂಕ ಪರೀಕ್ಷೆಯಲ್ಲಿ ವಿನೇಶ್ ಫೋಗಟ್ ಅವರ ತೂಕವು ನಿಗದಿತ ಮಿತಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟುವಿಗೆ ಯಾವುದೇ ವಿಭಾಗದಲ್ಲಿ 100 ಗ್ರಾಂ ಹೆಚ್ಚುವರಿ ತೂಕದ ಭತ್ಯೆ ನೀಡಲಾಗುತ್ತದೆ. ಆದರೆ ವಿನೇಶ್ ಅವರ ತೂಕ ಇದಕ್ಕಿಂತ ಹೆಚ್ಚಿದೆ ಹೀಗಾಗಿ ಅವರು ಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

ವಿನೇಶ್ ಫೋಗಟ್​ಗೆ ಬಿಗ್ ಶಾಕ್
ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಫೋಗಟ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ ಎಂದು ಐಒಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಫೈನಲ್ ಸ್ಪರ್ಧೆಗೂ ಮುನ್ನ ವಿನೇಶ್ ಫೋಗಟ್ ಅನರ್ಹಗೊಂಡಿರುವುದರಿಂದಾಗಿ ಇದೀಗ 50 ಕೆ.ಜಿ. ವಿಭಾಗದಲ್ಲಿ ಯಾವುದೇ ಕುಸ್ತಿಪಟು ಬೆಳ್ಳಿ ಪದಕ ಪಡೆಯಲು ಸಾಧ್ಯವಾಗುವುದಿಲ್ಲ. ಉಳಿದಂತೆ ಈ ವಿಭಾಗದಲ್ಲಿ ವಿನೇಶ್ ಅವರೊಂದಿಗೆ ಫೈನಲ್​ನಲ್ಲಿ ಸ್ಪರ್ಧಿಸಬೇಕಿದ್ದ ಅಮೆರಿಕದ ಕುಸ್ತಿಪಟುಗೆ ಚಿನ್ನದ ಪದಕ ಸಿಗಲಿದೆ.


Share It

You cannot copy content of this page