ರಾಜಕೀಯ ಸುದ್ದಿ

ಮತದಾರರಿಗೆ ಆಮಿಷ, ಬೆದರಿಕೆ ಆರೋಪದ ಕೇಸ್ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಡಿಕೆಶಿ ಮೇಲ್ಮನವಿ

Share It

ಬೆಂಗಳೂರು : ಮತದಾರರಿಗೆ ಬೆದರಿಕೆ ಹಾಕಿರುವ ಮತ್ತು ಆಮಿಷ ತೊಟ್ಟಿರುವ ಆರೋಪದಲ್ಲಿ ತಮ್ಮ ವಿರುದ್ಧ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿರುವುದನ್ನು ಪ್ರಶ್ನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಪರ ರಾಜರಾಜೇಶ್ವರಿ ನಗರದ ಅಪಾರ್ಟ್ಮೆಂಟ್ ನಲ್ಲಿ ಮತಯಾಚನೆ ಮಾಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿ ಅವರನ್ನು ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿತ್ತು. ನಂತರ ಆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲಂಚ ಮತ್ತು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಬಳಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ಹಕ್ಕುಪತ್ರ, ಕಾವೇರಿ ನೀರು ಬೇಕಿದ್ದರೆ ನಮಗೆ ಮತ ನೀಡಿ ಎಂದಿದ್ದ ಡಿಸಿಎಂ ಡಿಕೆಶಿ
ರಾಜರಾಜೇಶ್ವರಿ ನಗರದ ಅಪಾರ್ಟ್​ಮೆಂಟೊಂದರಲ್ಲಿ ಮತಯಾಚನೆ ಮಾಡಲು ತೆರಳಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್, “ನಾನು ಇಲ್ಲಿಗೆ ಬ್ಯುಸಿನೆಸ್ ಡೀಲ್​ ಮಾಡಲು ಬಂದಿದ್ದೇನೆ. ನಿಮಗೆ ಅಪಾರ್ಟ್​​ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ. ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುವ ವ್ಯವಸ್ಥೆ ಮಾಡುತ್ತೇನೆ” ಎಂದು ಆಮಿಷವೊಡ್ಡಿದ್ದರು ಎಂದು ಬಿಜೆಪಿ ಆರೋಪಿಸಿತ್ತು.

ಕಾವೇರಿ ನೀರು ಸಂಪರ್ಕ ದೊರೆಯದಿರುವುದು ಇನ್ನೊಂದು ಸಮಸ್ಯೆ. ಈ ಎರಡೂ ಸಮಸ್ಯೆಗಳನ್ನು ಬಗೆಹರಿಸಿಕೊಟ್ಟರೆ ನೀವೇನು ಕೊಡುತ್ತೀರಿ? ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಆಡಳಿತ, ಜಲ ಸಂಪನ್ಮೂಲ ಖಾತೆ ಎಲ್ಲವೂ ನನ್ನ ಕೈಯಲ್ಲೇ ಇದೆ. ಹೀಗಾಗಿ ನಾನೇ ಈ ಕೆಲಸವನ್ನು ನಿಮಗೆ ಮಾಡಿಕೊಡಬೇಕಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಮತದಾರರನ್ನು ಉದ್ದೇಶಿಸಿ ಹೇಳಿರುವುದನ್ನು ಬಿಜೆಪಿ ಟ್ವೀಟ್ ಮಾಡಿರುವುದು ವಿಡಿಯೋದಲ್ಲಿ ಕಂಡುಬಂದಿತ್ತು


Share It

You cannot copy content of this page