ಸುದ್ದಿ

ಪ್ರತಿ ತಿಂಗಳು 2 ನೇ ಮತ್ತು 3 ನೇ ಶನಿವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಕನಕಪುರ ಭೇಟಿ

Share It

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 3 ನೇ ಶನಿವಾರ ಕನಕಪುರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಆ ದಿನಗಳಂದು ಕ್ಷೇತ್ರದ ಜನರ ಸಮಸ್ಯೆ, ಅಹವಾಲು ಆಲಿಸಲಿದ್ದಾರೆ.

ಕನಕಪುರ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Share It

You cannot copy content of this page