ಉಪಯುಕ್ತ ರಾಜಕೀಯ ಸುದ್ದಿ

ಸರಕಾರಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿದ ಸರಕಾರ

Share It


ಬೆಂಗಳೂರು: ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯಗೊಳಿಸಲು ಸಚಿವ ಸಂಪುಟ ತೀರ್ಮಾನಿಸಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಂಡಿದ್ದು, ಜನವರಿ-26ರ ಗಣರಾಜ್ಯೋತ್ಸವ ದಿನದ ಜತೆಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿ ಸಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರ ಕಡ್ಡಾಯವಾಗಿ ಇಡಲು ಸೂಚಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಅದಲ್ಲದೇ, ನವೆಂಬರ್-26ರಂದು ನಡೆಯುವ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇರಿಸಲು ಕಡ್ಡಾಯವಾಗಿ ಲ್ ಕೈಗೊಳ್ಳುವಂತೆ ಸಚಿವ ಸಂಪುಟ ನಿರ್ಧರಿಸಲಾಗಿದೆ.


Share It

You cannot copy content of this page