ಬೆಂಗಳೂರು: ಖಾಲಿ ಇರುವ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಡಾ.ಕೆ.ಆರ್.ರಾಜ್‌ಕುಮಾರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.
ಡಾ.ಕೆ.ಆರ್ ರಾಜ್ ಕುಮಾರ್ ಅವರು ಪರಿಶೀಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದು. ಇವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ನೇಮಕ ಮಾಡಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎಂ.ಜೆ. ಭವ್ಯ ಅವರು ಆದೇಶ ಮಾಡಿದ್ದಾರೆ.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು.,ಗಳ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ನಿಗಮದ ಅಧೀಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 88 ಕೋಟಿ ರು. ನಿಗಮದಿಂದ ಬೇರೆಯ ಖಾತೆಗೆ ವರ್ಗಾವಣೆ ಆಗಿರುವುದು ನಿಗಮದ ಯಾವ ಅಧಿಕಾರಿಗೂ ಗೊತ್ತಿಲ್ಲ. ಈ ಎಲ್ಲ ಪ್ರಕರಣ ಇದೀಗ ಸಿಐಡಿ ತನಿಖೆಗೆ ಸರಕಾರ ವಹಿಸಿದ್ದು, ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಿದೆ.
