ಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತಿ ಜಾರಿ ಬೆನ್ನಲ್ಲೇ ಬಾಬಾ ಬುಡನ್ ಗಿರಿಯಲ್ಲಿ ವಸ್ತ್ರ ಸಂಹಿತಿ ಜಾರಿಗೆ ಒತ್ತಾಯ ಕೇಳಿ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿಯ ಇನಾಂ ದತ್ತ ದತ್ತಾತ್ರೇಯ ಬಾಬಬುಡನ್ ಸ್ವಾಮಿ ದರ್ಗಾದಲ್ಲಿ ವಸ್ತ್ರ ಸಂಹಿತಿ ಜಾರಿಯಾಗಬೇಕು ಎಂದು ಒತ್ತಾಯಿಸಲಾಗಿದೆ. ಈ ಸಂಬಂಧ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ.
ಭಾರತೀಯ ಸಂಪ್ರದಾಯದ ಉಡುಪುಗಳಿಗೆ ಮಾತ್ರವೇ ದರ್ಗಾದಲ್ಲಿ ಅವಕಾಶ ನೀಡಬೇಕು ಎಂದು ಸೈಯ್ಯದ್ ಬುಡನ್ ಶಾಖಾದ್ರಿ ವಂಶಸ್ಥರು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.