ಉಪಯುಕ್ತ ರಾಜಕೀಯ ಸುದ್ದಿ

೨-೩ ದಿನದಲ್ಲಿ ರೈತರ ಖಾತೆಗೆ ಬರ ಪರಿಹಾರ

Share It

ಬೆಂಗಳೂರು: ೨೭,೩೮,೯೧೧ ರೈತರಿಗೆ ಅರ್ಹತೆಯನುಸಾರ ಒಟ್ಟು ರೂ.೨,೪೨೫.೧೩ ಕೋಟಿಗಳನ್ನು ಆಧಾರ್ ಜೋಡಣೆಯಾದ ರೈತರ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮುಖಾಂತರ ನೇರ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಕ್ರಮದ ನಂತರ ಆರ್‌ಬಿಐನಿಂದ ರೈತರ ಖಾತೆಗೆ ಹಣ ವರ್ಗಾಯಿಸಲು ೪೮ ಗಂಟೆಗಳವರೆಗೆ ಸಮಯ ತೆಗೆದುಕೊಳ್ಳುತ್ತದೆ. ಇದೇ ಸೋಮವಾರದಿಂದ ಅನ್ವಯವಾಗುವಂತೆ ರೈತರ ಖಾತೆಗೆ ನೇರವಾಗಿ ಜಮಾವಾಗಲಿದೆ. ಎಲ್ಲ ರೈತರ ಖಾತೆಗಳಿಗೆ ಮುಂದಿನ ೨-೩ ದಿನಗಳೊಳಗಾಗಿ ಬರಪರಿಹಾರ ಮೊತ್ತವು ಜಮೆಯಾಗಲಿದೆ ಎಂದಿದ್ದಾರೆ.

ಕೇAದ್ರ ಸರ್ಕಾರದ ಎನ್‌ಡಿಆರೆಫ್ ಮಾರ್ಗಸೂಚಿಗಳ ಪ್ರಕಾರ ಅನುದಾನ ನಿರೀಕ್ಷಿಸಿ ಮೊದಲ ಹಂತದ ಪರಿಹಾರವಾಗಿ ೩೩,೫೮,೯೯೯ ರೈತರಿಗೆ ಒಟ್ಟು ರೂ.೬೩೬.೪೫ ಕೋಟಿಗಳನ್ನು ಈಗಾಗಲೇ ಫೆಬ್ರುವರಿ ಹಾಗೂ ಮಾರ್ಚ್ ಮಾಹೆಗಳಲ್ಲಿ ಪಾವತಿಸಲಾಗಿದೆ. ಈ ಪೈಕಿ ೪,೪೩,೬೯೧ ಅತೀ ಕಡಿಮೆ ಜಮೀನು ಇರುವ ರೈತರಿಗೆ Sಆಖಈ ಮಾರ್ಗಸೂಚಿಗಳನ್ವಯ ಸಂಪೂರ್ಣ ಪರಿಹಾರ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂಬAಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಬರ ಪರಿಹಾರ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದಾದ ಬಳಿಕ ಏ.೨೬ರಂದು ರೂ.೩,೪೫೪.೨೨ ಕೋಟಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಹಣ ಬಿಡುಗಡೆ ಅಗುತ್ತಿದಂತೆಯೇ ಅರ್ಹರಿಗೆ ಪರಿಹಾರ ಪಾವತಿಸಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಏ. ೨೭ ಮತ್ತು ೨೮ರಂದು ಎರಡು ದಿನಗಳು ರಜಾದಿನಗಳು. ನಂತರ ೨೯ ಮತ್ತು ೩೦ ಏಪ್ರಿಲ್ ಎರಡು ದಿನಗಳಂದು ಬಾಕಿ ಉಳಿದ ಬೆಳೆ ಹಾನಿ ಪರಿಹಾರ ನೀಡಲು ಎಲ್ಲ ತಾಂತ್ರಿಕ ವ್ಯವಸ್ಥೆ ಮಾಡಿಕೊಳ್ಳಲಾಯಿತು. ಮೇ ೧ ರಂದು ಪುನಃ ಕಾರ್ಮಿಕ ದಿನಾಚರಣೆ ನಿಮಿತ್ತ ಸರ್ಕಾರಿ ರಜಾ ದಿನ. ಮೊದಲ ಹಂತದ ಬೆಳೆ ಹಾನಿ ಪರಿಹಾರ ನೀಡಿ ಇನ್ನುಳಿದ ಬಾಕಿ ಮೊತ್ತಕ್ಕೆ ಮಾರ್ಗಸೂಚಿಗಳ ಪ್ರಕಾರ ಅರ್ಹತೆ ಅನುಸಾರ ಎಲ್ಲ ಅರ್ಹ ರೈತರಿಗೆ ಪಾವತಿ ಮಾಡಲು ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಇವರಿಗೆ ರೂ. ೩,೪೫೪.೨೨ ಕೋಟಿಗಳನ್ನು ಬಿಡುಗಡೆಗೊಳಿಸಲು ಮೇ ೨ ರಂದು ಆದೇಶ ಹೊರಡಿಸಲಾಗಿದೆ ಎಂದು ವಿವರಿಸಿದ್ದಾರೆ.

ಇಲ್ಲಿಯವರೆಗೆ ಒಟ್ಟು ೩೧,೮೨,೬೦೨ ರೈತರಿಗೆ ಸಂಪೂರ್ಣ ಬೆಳೆ ಹಾನಿ ಪರಿಹಾರ ಪಾವತಿಸಲಾಗಿದೆ. ಇನ್ನೂ ೨ ಲಕ್ಷ ರೈತರಿಗೆ ಬರಪರಿಹಾರ ಮೊತ್ತವನ್ನು ಪಾವತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ರಾಜ್ಯದ ೨೨೪ ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಮೊದಲ ಹಂತದಲ್ಲಿ ರಾಜ್ಯ ಸರ್ಕಾರವೇ ರೈತರಿಗೆ ಬರ ಪರಿಹಾರ ಪಾವತಿಸಿದ್ದು, ಇದೀಗ ಎನ್‌ಡಿಆರ್‌ಎಫ್ ಪರಿಹಾರ ಹಣ ಲಭ್ಯವಾಗಿದೆ. ಅಲ್ಲದೆ ರಾಜ್ಯದ ಬಾಕಿ ಪರಿಹಾರ ಹಣ ಪಡೆಯಲೂ ಕೇಂದ್ರದ ಜೊತೆಗಿನ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.


Share It

You cannot copy content of this page