ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ತಲ್ಲಣಗೊಂಡ ಜನತೆ

Share It

ವಿಜಯಪುರ : ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಆತಂಕಗೊಂಡ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು, ಟಕ್ಕಳಕಿ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಇಂದು ರಾತ್ರಿ 9.26 ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದ ಗ್ರಾಮಸ್ಥರು. ಮನೆಯಲ್ಲಿ ಪಾತ್ರೆಗಳು ಕೆಳಗೆ ಬಿದ್ದಿವೆ.

ಹಲವು ವರ್ಷಗಳಿಂದ ಪದೇಪದೇ ಭೂಮಿ ಕಂಪಿಸುತ್ತಿದೆ ಜೊತೆಗೆ ನಿಗೂಢ ಶಬ್ದಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇದೇ ವರ್ಷದ ಮೊದಲ ತಿಂಗಳಲ್ಲೇ 2.6 ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಭೂಕಂಪನಕ್ಕೆ ಮನೆಯ ಗೋಡೆ ಬಿರುಕು ಬಿಟ್ಟಿದ್ದವು, ಮನೆಯಲ್ಲಿನ ಪಾತ್ರೆಗಳು ಬಿದ್ದಿದ್ದವು.

ಕಳೆದ ನಾಲ್ಕೈದು ವರ್ಷಗಳಿಂದ ಭೂಕಂಪನ, ನಿಗೂಢ ಶಬ್ದಕ್ಕೆ ಜಿಲ್ಲೆಯ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಹಿಂದೆ ಕಂಪಿಸಿದ ಘಟನೆಯಿಂದ ಹಲವು ಕುಟುಂಬಗಳು ಊರು ತೊರೆದಿವೆ. ಇದೀಗ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು ಪದೇ ಪದೇ ಕಂಪಿಸಲು ಕಾರಣವೇನು? ಎಂಬುದೇ ತಿಳಿಯದಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.


Share It

You cannot copy content of this page