ಬೆಳಗಾವಿ: ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಚಿವರ ಮನೆ ಮೇಲೆ ಈ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ತಿಂಗಳ ಹಿಂದೆ ಬೆಳಗಾವಿ ಅಬಕಾರಿ ಆಯುಕ್ತ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರ ಸಂಬಂಧಿಕ ವೈ.ಮಂಜುನಾಥ ಅವರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ಹಿನ್ನಲೆಯಲ್ಲಿ ಸಿಕ್ಕಿದ ದಾಖಲೆಗಳ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಸಚಿವರ ಮನೆ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ED Raid On Minister: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ

