ರಾಜಕೀಯ ಸುದ್ದಿ

ಪ್ರತಿಭಟನೆಗೆ ನಿಂತ ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆತ

Share It

ಬೆಂಗಳೂರು: ಕೇಂದ್ರ ಸರಕಾರ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ನಾಯಕರು ಅದ್ಯಾಕೆ ಪ್ರತಿಭಟನೆ ನಡೆಸುತ್ತಿದ್ದಾರೆ ಅನ್ನೋದು ಜನರಿಗೆ ಗೊತ್ತಾಗುತ್ತಿಲ್ಲ.

ಆದರೆ, ಇದ್ದಕ್ಕಿದ್ದಂತೆ ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ ನಾಯಕರಿಗೆ ಸಾರ್ವಜನಿಕರು ಮೊಟ್ಟೆಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಚೇರಿಯ ಕಡೆಗೆ ಹೋಗುತ್ತಿದ್ದ ಬಿಜೆಪಿ ನಾಯಕರ ಮೇಲೆ ಸಾರ್ವಜನಿಕರೊಬ್ಬರು ಮೊಟ್ಟೆ ಎಸೆದಿದ್ದಾರೆ ಎಂದು ವರದಿಯಾಗಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್, ಇದನ್ನು ಖಂಡಿಸಿ ಪ್ರತಿಭಟನೆಗೆ ಇಳಿದ ರಾಹುಲ್ ಗಾಂಧಿಯ ಬಂಧನ ಪ್ರಶ್ನಿಸಿ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಆದರೆ, ಬಿಜೆಪಿ ನಾಯಕರು ಕೂಡ ಪ್ರತಿಭಟನೆ ನಡೆಸಲು ಮುಂದಾಗಿ ಅವಮಾನಕ್ಕೊಳಗಾಗಿದ್ದಾರೆ.

ಮೆರವಣಿಗೆಯಲ್ಲಿ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ನೇತೃತ್ವದಲ್ಲಿ ಪ್ರತಿಭಟನೆಗೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಈ ವೇಳೆ ಸಾರ್ವಜನಿಕರು ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.


Share It

You cannot copy content of this page