ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಕೊಡುಗೆಯಾಗಿ ಕಾಂಗ್ರೆಸ್ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಎಐಸಿಸಿ ವಿಧಾನ ಪರಿಷತ್ ಸದಸ್ಯತ್ವದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಚಿವ ಎನ್.ಎಸ್.ಬೋಸ್ ರಾಜು ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಯಲಿದ್ದಾರೆ. ಅವರ ಜತೆಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್, ವೈವಾನ್ ಡಿಸೋಜಾ ಕೂಡ ವಿಧಾನ ಪರಿಷತ್ ಅಭ್ಯರ್ಥಿಗಳಾಗಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ, ವಸಂತ್ ಕುಮಾರ್, ಬಿಲ್ಕಿಸ್ ಬಾನು, ಜಗದೇವ್ ಗುತ್ತೇದಾರ್ ಮತ್ತು ಮುಂದೆ ಖಾಲಿಯಾಗಲಿರುವ ಸ್ಥಾನಕ್ಕೆ ಬಸವನಗೌಡ ಬಾದರ್ಲಿ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೆಸ್ ಏಳು ಸ್ಥಾನಗಳನ್ನು ಆಯ್ಕೆ ಮಾಡುವ ಅವಕಾಶವಿದ್ದು, ಎಲ್ಲರೂ ಆಯ್ಕೆಯಾಗುವುದು ಬಹುತೇಕ ಖಚಿತ.
ಬಿಜೆಪಿಯಿಂದ ಸಿ.ಟಿ.ರವಿ, ರವಿಕುಮಾರ್: ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಸಿ.ಟಿ. ರವಿ ಅವರನ್ನು ಪರಿಷತ್ ಚುನಾವಣೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಎನ್. ರವಿಕುಮಾರ್ ಮತ್ತು ಎಂ,ಜಿ,ಮೋಳೆ ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

