ಸುದ್ದಿ

ಪಂಚ ರಾಜ್ಯಗಳ ಚುನಾವಣೆ ಇಂದು ಘೋಷಣೆ ಸಾಧ್ಯತೆ : ಎರಡೇ ಹಂತದಲ್ಲಿ ನಡೆಯಲಿದೆ ಪ.ಬಂಗಾಳ ಚುನಾವಣೆ

Share It

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದ್ದು, ಪಶ್ಚಿಮ ಬಂಗಾಳ ಚುನಾವಚಣೆಯನ್ನು ಕೇವಲ ಎರಡೇ ಹಂತದಲ್ಲಿ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

ಮೂಲಗಳ ಪ್ರಕಾರ ಭಾನುವಾರ ಸಂಜೆ ವೇಳೆ ಚುನಾವಣಾ ಆಯೋಗದ ಸುದ್ದಿಗೋಷ್ಠಿ ನಡೆಯಲಿದ್ದು, ಐದು ರಾಜ್ಯಗಳ ಚುನಾವಣೆ ದಿನಾಂಕ, ಸಿದ್ಧತೆ ಮತ್ತಿತರ ವಿಚಾರಗಳನ್ನು ಹಂಚಿಕೊಳ್ಳಲಿದೆ. ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ.

ಕೇರಳ ಮತ್ತು ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿರುವ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ಎರೆಡು ಹಂತದಲ್ಲಿ ಚುನಾವಣೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಕಳೆದ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಚುನಾವಣೆ ನಡೆದಿತ್ತು.


Share It

You cannot copy content of this page