ಬೆಂಗಳೂರು: ಆಂಧ್ರ ಪ್ರದೇಶದ ಸಿರಾಜ್ ಪಟ್ಟಣದಲ್ಲಿ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸ್ಫೋಟವಾಗಿದ್ದು, 50 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ ಸಿರಾಜ್ ನಲ್ಲಿ ಕೆಮಿಕಲ್ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿರುವ ಪಡೆಗಳು ಅನೇಕರನ್ನು ರಕ್ಷಣೆ ಮಾಡಿದ್ದು, 20 ಜನರಿಗೆ ಗಾಯವಾಗಿದ್ದು ಅವರನ್ನೆಲ್ಲ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತರನ್ನು ಗುರುತಿಸುವ ಕಾರ್ಯವನ್ನು ಪೊಲೀಸರು, ನಡೆಸುತ್ತಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.