ಬೆಂಗಳೂರು: ಕಲಾಸಿಪಾಳ್ಯದ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆಯಾಗಿದ್ದು ಆತಂಕದ ವಾತಾವರಣ ಸೃಷ್ಟಿಸಿದೆ.
ಬಸ್ ನಿಲ್ದಾಣದ ಶೌಚಾಲಾಯದಲ್ಲಿ ಮಧ್ಯಾಹ್ನ ಎರಡು ಗಂಟೆ ಸುಮಾರಿನಲ್ಲಿ ಸ್ಫೋಟಕವಿರುವ ಬ್ಯಾಗ್ ಪತ್ತೆಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಿಂದ ಬಸ್ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಡಿಸಿಪಿ ಗಿರೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.