ಉಪಯುಕ್ತ ಸುದ್ದಿ

ಚುನಾವಣೆ ಘೋಷಣೆಯಾಗುವವರೆಗೆ ಗ್ರಾಪಂ ಸದಸ್ಯರ ಅವಧಿ ವಿಸ್ತರಣೆ?

Share It

ಬೆಂಗಳೂರು: ಚುನಾವಣೆ ಘೋಷಣೆಯಾಗುವವರೆಗೆ ಗ್ರಾಪಂ ಗಳ ಅವಧಿ ವಿಸ್ತರಣೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. ಇದಕ್ಕೆ ಸಂಬAಧಿಸಿ ಕಾನೂನು ಸಲಹೆ ಪಡೆದುಕೊಳ್ಳುತ್ತಿದ್ದೇವೆ ಎಂದು ಪಂಚಾಯರ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಿಲುವಳಿ ಸೂಚನೆ ಮೇಲೆ ಮಾತನಾಡಿದ ಅವರು, ಈ ಕುರಿತು ಸಿಎಂ ಜತೆಗೆ ಚರ್ಚೆ ನಡೆಸಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆದುಕೊಳ್ಳಲಾಗುತ್ತಿದೆ. ಸಾಮಾನ್ಯವಾಗಿ ಚುನಾವಣೆಗಳು ನಡೆಯದಿದ್ದರೆ, ಹೀಗೆ ಅಧಿಕಾರವಧಿ ಮುಂದುವರಿಸುವ ಪ್ರಯತ್ನ ನಡೆಸಲಾಗುತ್ತದೆ ಎಂದು ತಿಳಿಸಿದರು.

ಚುನಾವಣೆ ಮುಂದೂಡುವ ಅವಕಾಶ ಕಡಿಮೆಯಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ, ಚುನಾವಣೆ ಮುಂದಕ್ಕೆ ಹೋಗುವ ಯಾವುದೇ ಸಾಧ್ಯತೆಗಳಿಲ್ಲ. ಒಂದು ವೇಳೆ ಮುಂದೂಡಲ್ಪಟ್ಟರೆ ಅವಧಿ ವಿಸ್ತರಣೆ ಬಗ್ಗೆ ಯೋಚಿಸಲಾಗುತ್ತದೆ ಎಂದರು.


Share It

You cannot copy content of this page