ದೇವನಹಳ್ಳಿ: ಖಾಸಗಿ ಫೈನಾನ್ಸ್ ಸಂಸ್ಥೆ ನೀಡಿದ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಜನ ಫೈನಾನ್ಸ್ ಸಂಸ್ಥೆಯಿಂದ ಐದು ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲದ ಕಂತುಗಳನ್ನು ಕಟ್ಟದ ಕಾರಣಕ್ಕೆ ಬ್ಯಾಂಕ್ ಸಿಬ್ಬಂದಿ ನೊಟೀಸ್ ಕೊಟ್ಟಿದ್ದರು. ಮನೆ ಜಪ್ತಿ ಮಾಡಿಸುವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿರುವ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವ ಮರುಪಾವತಿಗೆ ಬ್ಯಾಂಕ್ ಸಿಬ್ಬಂದಿ ನೀಡಿದ ಕಿರುಕುಳವೇ ಆತನ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಬ್ಯಾಂಕ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಅಲ್ಲಿವರೆಗೆ ಶವಸಂಸ್ಕಾರ ಮಾಡುವುದಿಲ್ಲ ಎಂದು ಸಂಬಂಧಿಕರು ಪಟ್ಟುಹಿಡಿದಿದ್ದಾರೆ.