ಹೊಸಕೋಟೆ: ಪೊಲೀಸರ ಕಿರುಕುಳ ಆರೋಪ, ಹೊಲದಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ (44) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಹಿಳೆ ನಾಪತ್ತೆ ಪ್ರಕರಣ ಸಂಬಂಧ ರೈತ ಮಂಜುನಾಥ್ ಗೆ ಪೊಲೀಸರು ಕಿರುಕುಳ ನೀಡಿದ್ದಾರೆಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
3-4 ದಿನಗಳಿಂದ ನಿತ್ಯ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಮನನೊಂದು ತಾನು ವ್ಯವಸಾಯ ಮಾಡುತ್ತಿದ್ದ ಹೊಲದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತ ಮಂಜುನಾಥ್ ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಮಲ್ಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

