ಬೆಂಗಳೂರು: ದೊಡ್ಡಬಳ್ಳಾಪುರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಸ್ತೆಯಲ್ಲಿ ಇನೋವಾ ಕಾರು ಮಗುಚಿಬಿದ್ದಿದೆ. ಇದರಿಂದಾಗಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿಯೇ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರದ ಮಾಕಳಿ ಬಳಿ ಅಪಘಾತ ಸಂಭವಿಸಿದ್ದು, ಮೃತಪಟ್ಟವರು ಯಾರು ಮತ್ತು ಎಲ್ಲಿಯವರು ಎಂಬುದನ್ನು ಇನ್ನಷ್ಟೇ ಪತ್ತೆಹಚ್ಚಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರನ್ನು ನಾರಾಯಣ, ಈಶ್ವರಪ್ಪ, ಕಾಳಪ್ಪ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತರೆಲ್ಲರೂ ಭೀಮೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿದ್ದಾರೆ. ಆಗ ಏಕಾಏಕಿ ಬಸ್ ಅಡ್ಡ ಬಂದಿದ್ದು, ಗುದ್ದುವುದನ್ನು ತಪ್ಪಿಸಲು ಹೋಗಿ ಇನೋವಾ ಕಾರು ರಸ್ತೆಯಲ್ಲಿ ಪಲ್ಟಿಯಾಗಿದೆ.