ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮುಗ್ಧ ಮಗುವೊಂದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್(3) ಮೃತ ದುರ್ದೈವಿ ಮಗುವಾಗಿದೆ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ ಎಂದು ತಿಳಿದುಬಂದಿದೆ.
ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರದಲ್ಲಿ ಜಗಳ ನಡೆದಿದೆ. ಈ ವೇಳೆ ಗಲಾಟೆ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.