ಬೆಂಗಳೂರು: ವಿರಾಟ್ ಕೋಹ್ಲಿಯೇ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಕಾರಣ ಎಂದು ಸಿಐಡಿ ತನಿಖೆಯಲ್ಲಿ ಉಲ್ಲೇಖ ಮಾಡಲಾಗಿದ್ದು, ಕೋಹ್ಲಿ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.
ಸಚಿವ ಸಂಪುಟಕ್ಕೆ ನ್ಯಾಯಮೂರ್ತಿ ಮೈಕಲ್ ಡಿ.ಖುನ್ಹಾ ನೀಡಿರುವ ವರದಿ, ಸಿಐಡಿ ತನಿಖಾ ವರದಿಗಳು ಸಲ್ಲಿಕೆಯಾಗಿದ್ದು, ವರದಿಯಲ್ಲಿ ವಿರಾಟ್ ಕೋಹ್ಲಿಯೇ ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೋಹ್ಲಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಕಾಲ್ತುಳಿತದಲ್ಲಿ 11 ಜನರು ಪ್ರಾಣಬಿಟ್ಟಿದ್ದು, ಅದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಆಯುಕ್ತರು ಸೇರಿ 11 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ತನಿಖೆಗಾಗಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಇದೀಗ ವರದಿಯಲ್ಲಿ ಕೋಹ್ಲಿ ವಿರುದ್ಧ ಎಫ್‌ಐಆರ್ ದಾಖಲಿಸುವ ಮುನ್ಸೂಚನೆ ಸಿಕ್ಕಿದೆ.