ಅಪರಾಧ ಸುದ್ದಿ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಅಗ್ನಿಅವಘಡ: 40 ಜನರ ಸಾವು

Share It

ಏಜೆನ್ಸಿ : ಸ್ವಿಸ್‌ನ ಕ್ರಾನ್ಸ್-ಮಾಂಟಾನಾದ ಐಷಾರಾಮಿ ಬಾರ್‌ವೊಂದರಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ೪೦ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಘಟನೆ ವರದಿಯಾಗುತ್ತಿದ್ದಂತೆಯೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಕಾರ್ಯಕರ್ತರು ಧಾವಿಸಿ ಪರಿಶೀಲಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ವಾಲಿಸ್ ಕ್ಯಾಂಟನ್ ಪೊಲೀಸರು ತಿಳಿಸಿದ್ದಾರೆ.

ಹೊಸ ವರ್ಷದ ಆಚರಣೆಗೆ ಸುಮಾರು ೧೦೦ ಜನರು ಅಲ್ಲಿ ಸೇರಿದ್ದರು. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ ಇತರರು ಗಾಯಗೊಂಡಿದ್ದಾರೆ. ಪ್ರಮುಖ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ.


Share It

You cannot copy content of this page